ಕೊಪ್ಪಳ:- ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ಇನ್‌ಸ್ಟಾದಲ್ಲಿ ಪರಿಚಯವಾದ ಯುವಕನೊಂದಿಗೆ ಮದ್ವೆಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ.
23 ವರ್ಷದ ಪುಷ್ಪವತಿ ಅನುಮಾನಾಸ್ಪದ ಸಾವನ್ನಪ್ಪಿರುವ ಗೃಹಿಣಿ. ಇವರಿಗೆ ಮೂರು ತಿಂಗಳ ಹಸುಗೂಸು ಇದೆ. ಎರಡು ದಿನಗಳ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ.
ಮೂಲತಃ ಹಾಸನ ಜಿಲ್ಲೆಯ ಪುಷ್ಪವತಿ ಇನ್‌ಸ್ಟಾದಲ್ಲಿ ಪರಿಚಯವಾಗಿದ್ದ ಮರಿಯಪ್ಪ ಎಂಬಾತನನ್ನ ಪ್ರೀತಿಸಿ ಮದ್ವೆಯಾಗಿದ್ದರು. ಇದೀಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪತಿ ಮನೆಯವರೇ ಹೊಡೆದು ನೇಣು ಹಾಕಿರುವುದಾಗಿ ಪುಷ್ಪವತಿ ಕುಟುಂಬಸ್ಥರು ಆರೋಪಿಸಿದ್ದಾರೆ. 2 ದಿನಗಳ ಹಿಂದೆ ಸಾವನ್ನಪ್ಪಿದ್ರು, ಶವ ಇನ್ನು ಅದೇ ಸ್ಥಳದಲ್ಲಿದೆ ಎಂದು ತಿಳಿದು ಬಂದಿದೆ.
ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.