ಬೆಂಗಳೂರು: ನೇಣು ಬಿಗಿದುಕೊಂಡು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
Advertisement
ಎಡ್ವಿನ್ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆರು ವರ್ಷಗಳ ಹಿಂದೆ ಮಣಿ ಜೊತೆ ವಿವಾಹವಾದ ಎಡ್ವಿನ್, ದಂಪತಿಯ ನಡುವೆ ಆಗಾಗ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದುದಾಗಿ ತಿಳಿದು ಬಂದಿದೆ. ನಿನ್ನೆ ಬೆಳಗ್ಗೆ ದೇವಸ್ಥಾನಕ್ಕೆ ಹೋಗಿ ಬರುತ್ತೇನೆಂದು ಮನೆಯಿಂದ ಹೊರಟಿದ್ದ ಮಣಿ, ವಾಪಸ್ ಬಂದಾಗ ಮನೆಯ ಬಾಗಿಲು ಲಾಕ್ ಆಗಿದ್ದು, ಒಳಗೆ ಎಡ್ವಿನ್ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಇದನ್ನು ಆತ್ಮಹತ್ಯೆ ಎಂದರೂ, ಗಂಡನೇ ಕೊಲೆ ಮಾಡಿದ್ದಾನೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣದ ಬಗ್ಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಕೇಸ್ ದಾಖಲಾಗಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.


