ಬೆಂಗಳೂರು: ಎಲ್ಲಾ ಫ್ರೀಯಾಗಿ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು ಎಂದು ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಜಲಮಂಡಳಿ ಕಚೇರಿಯಲ್ಲಿ ನೀರಿನ ದರ ಏರಿಕೆ ಮಾತನಾಡಿದ ಅವರು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡೋಕೆ ಸೂಚಿಸಲಾಗಿದೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ನೀರು ಫ್ರೀಯಾಗಿ ಕೊಡ್ತಿದ್ದೇವೆ.
ಇನ್ಮೇಲೆ ಫ್ರೀಯಾಗಿ ಕೊಡೋಕೆ ಆಗಲ್ಲ. ಒಂದು ಪೈಸೆಯಾದರು ಬಿಲ್ ಕಟ್ಟಬೇಕು ಎಂದರು. ಎಲ್ಲಾ ಫ್ರೀ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು? ಸರ್ಕಾರಿ ನೌಕರರು ಸಂಬಳ ಜಾಸ್ತಿ ಮಾಡಿ ಅಂತಿದ್ದಾರೆ, ಎಲ್ಲಾ ಸರಿದೂಗಿಸಿಕೊಂಡು ಹೋಗಬೇಕಲ್ವಾ? ಎಂದು ಹೇಳಿದರು.
2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿಲ್ಲ. ಇದರಿಂದ ತಿಂಗಳಿಗೆ 85 ಕೋಟಿಯಂತೆ ವರ್ಷಕ್ಕೆ 1 ಸಾವಿರ ಕೋಟಿ ಸಂಸ್ಥೆ ನಷ್ಟ ಎದುರಿಸುತ್ತಿದೆ. ಹೀಗಾಗಿ ನೀರಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಶೀಘ್ರವೇ ನೀರಿನ ದರ ಏರಿಕೆ ಮಾಡುತ್ತೇನೆ, ಜಲಮಂಡಳಿ ಉಳಿಬೇಕು ಅಂದ್ರೆ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.