HomeEntertainment'ನಿಮ್ಮ ಆರೋಗ್ಯ ಹೇಗಿದೆ?'; ಆರೋಗ್ಯದ ಊಹಾಪೋಹಗಳಿಗೆ ಸಲ್ಮಾನ್ ಖಾನ್ ಸ್ಟೈಲಿಷ್ ಟಾಂಗ್!

‘ನಿಮ್ಮ ಆರೋಗ್ಯ ಹೇಗಿದೆ?’; ಆರೋಗ್ಯದ ಊಹಾಪೋಹಗಳಿಗೆ ಸಲ್ಮಾನ್ ಖಾನ್ ಸ್ಟೈಲಿಷ್ ಟಾಂಗ್!

For Dai;y Updates Join Our whatsapp Group

ಮುಂಬೈ: ಆರೋಗ್ಯ ಹದಗೆಟ್ಟಿದೆಯೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗುತ್ತಿದ್ದಂತೆಯೇ ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮದೇ ಸ್ಟೈಲ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹೊಸ ಫೋಟೋಗಳನ್ನು ಹಂಚಿಕೊಂಡು “ನಿಮ್ಮೆಲ್ಲರ ಆರೋಗ್ಯ ಹೇಗಿದೆ?” ಎಂದು ಪ್ರಶ್ನಿಸಿರುವ ನಟ, ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಪರೋಕ್ಷ ಉತ್ತರ ನೀಡಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಸಲ್ಮಾನ್ ಖಾನ್ ಅವರ ಇತ್ತೀಚಿನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ವಿಡಿಯೊದಲ್ಲಿ ಅವರು ತುಂಬಾ ಸಣ್ಣಗಾಗಿರುವಂತೆ ಹಾಗೂ ಮುಖದಲ್ಲಿ ಆಯಾಸದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅಭಿಮಾನಿಗಳು ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಈ ಚರ್ಚೆಗಳು ತೀವ್ರವಾಗುತ್ತಿದ್ದಂತೆ ಸಲ್ಮಾನ್ ಖಾನ್ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆರೋಗ್ಯದ ಬಗ್ಗೆ ನೇರ ಸ್ಪಷ್ಟನೆ ನೀಡದೆ, “ನಿಮ್ಮೆಲ್ಲರ ಆರೋಗ್ಯ ಹೇಗಿದೆ?” ಎಂಬ ಒಂದು ಸಾಲಿನ ಸಂದೇಶದ ಮೂಲಕ ವದಂತಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.

ಹೊಸ ಫೋಟೋಗಳಲ್ಲಿ ಸಲ್ಮಾನ್ ಖಾನ್ ಫಿಟ್, ರಿಲ್ಯಾಕ್ಸ್ ಹಾಗೂ ಆತ್ಮವಿಶ್ವಾಸದಿಂದ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ನೆಮ್ಮದಿ ಮೂಡಿಸಿದೆ. “ನೀವು ಆರೋಗ್ಯವಾಗಿದ್ದರೆ ಸಾಕು” ಎಂದು ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ವೃತ್ತಿಜೀವನದತ್ತ ಗಮನಹರಿಸಿರುವ ಸಲ್ಮಾನ್ ಖಾನ್, ಅಪೂರ್ವ ಲಾಖಿಯಾ ನಿರ್ದೇಶನದ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕದ ಕುರಿತು ಮಾತ್ರ ಅವರು ಇನ್ನೂ ಮೌನ ವಹಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img