ಬಂಡೆ ಹೊಡೆದು ಸಂಪಾದನೆ ಮಾಡಿದ್ದು ಎಷ್ಟು..? ಡಿಕೆಶಿ ವಿರುದ್ಧ ಗುಡುಗಿದ ಕುಮಾರಸ್ವಾಮಿ

0
Spread the love

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದಾ ದುಡ್ಡು ಹೊಡೆಯುವ ಕೆಲಸ ಮಾಡಿಲ್ಲ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ನೋಡಿ ಕಾಂಗ್ರೆಸ್ ನಿದ್ದೆ ಹಾಳಾಗಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ವೇಳೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾ ದುಡ್ಡು ಹೊಡೆಯುವ ಕೆಲಸ ಮಾಡಿಲ್ಲ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ನೋಡಿ ಕಾಂಗ್ರೆಸ್ ನಿದ್ದೆ ಹಾಳಾಗಿದೆ. ಕೇತನಗಾನಹಳ್ಳಿಯಲ್ಲಿ ಆಸ್ತಿ ಖರೀದಿ ಮಾಡುವಾಗ ಯಾರಿಗಾದರೂ ದಬ್ಬಾಳಿಕೆ ಮಾಡಿದ್ದೇನೆ ಅಂತ ಯಾರಾದರೂ ಒಬ್ಬರು ಹೇಳಿದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

Advertisement

ಇನ್ನೂ ನಿವೃತ್ತ ಯೋಧನ ಪುತ್ರಿಯನ್ನು ಅಪಹರಿಸಿ, ಆಸ್ತಿ ಕೊಡದಿದ್ದರೆ ಮಗಳನ್ನು ಕತ್ತರಿಸಿ ಹಾಕುತ್ತೇನೆ ಅಂತ ಹೆದರಿಸಿ ಅವರಿಂದ ಅಜ್ಜಯ್ಯನ ದೇವಸ್ಥಾನದ ಪಕ್ಕದಲ್ಲಿನ ಜಾಗವನ್ನು ಬರೆಸಿಕೊಂಡಿದ್ದೀರಿ ಎಂದರು. ಬಿಡದಿಯಲ್ಲಿ ಐಕಾನ್ ನರ್ಸಿಂಗ್ ಸ್ಕೂಲ್ ಭೂಮಿ ಯಾರದ್ದು, ಸಾಲ ಪಡೆದಿದ್ದವರನ್ನು ಹೆದರಿಸಿ ಭೂಮಿ ಬರೆಸಿಕೊಂಡರಲ್ಲ. ಉಪಮುಖ್ಯಮಂತ್ರಿಯಾಗಿ ಸದಾಶಿವನಗರದಲ್ಲಿ ಮೂವರು ವಿಧವೆಯನ್ನು ಬೆದರಿಸಿ ನಿಮ್ಮ ಮಗಳ ಹೆಸರಿಗೆ ಆಸ್ತಿ ಬರೆಸಿಕೊಂಡಿದ್ದೀರಿ ಇವುಗಳನ್ನು ತನಿಖೆ ಮಾಡಲು ಒಂದು ಸಿಬಿಐ, ಇಡಿ ಸಾಕಾಗುವುದಿಲ್ಲ ಎಂದರು.

ರಾಮನಗರ ಶಾಸಕ ಮತ್ತು ನೀವು ಕೋಡಿಹಳ್ಳಿಯಲ್ಲಿ ಅಕ್ರಮವಾಗಿ ಬಂಡೆ ಒಡೆದು ರಫ್ತು ಮಾಡುತ್ತಿದ್ದೀರಿ. ನೊಣವಿನಕೆರೆ ಅಜ್ಜಯ್ಯ ಏನಾದರೂ ನಿಮಗೆ ಕೊನೆಯ ಹಂತಕ್ಕೆ ಬಂದಿದ್ದೀಯಾ ಅಂತಾ ಹೇಳಿದ್ದಾರಾ ಕನಕಪುರದಲ್ಲಿ ಎಷ್ಟು ಕುಟುಂಬ ಹಾಳು ಮಾಡಿದ್ದೀರಿ ಡಿಕೆ ಶಿವಕುಮಾರ್ ಅವರೇ. ಡಿಕೆ ಶಿವಕುಮಾರ್ ಅವರೇ ಅಜ್ಜಯ್ಯನ ಮೇಲೆ ಗೌರವ ಇದ್ದರೆ, ಪ್ರಮಾಣ ಮಾಡಿ, ನಾನೂ ಮಾಡುತ್ತೇನೆ ಯಾರು ಪ್ರಾಮಾಣಿಕರು ಅಂತ ಗೊತ್ತಾಗುತ್ತೆ. ಇಂದಿನಿಂದ ಡಿಕೆ ಶಿವಕುಮಾರ್ ಅವರಿಗೆ ಅಜ್ಜಯ್ಯನ ಶಾಪ ಪ್ರಾರಂಭವಾಗಿದೆ. ಇನ್ಮುಂದೆ ಅಜ್ಜಯ್ಯ ಕೂಡ ಅವರಿಗೆ ರಕ್ಷಣೆ ಕೊಡಲ್ಲ ಎಂದು ಹೇಳಿದರು.

ಏಕವಚನದಲ್ಲಿ ಮಾತನಾಡಬೇಕು ಅಂದರೆ ನಿಮಗಿಂತ ಹೆಚ್ಚಿನ ರೀತಿಯಲ್ಲಿ ನಮಗೆ ಮಾತನಾಡಲು ಬರುತ್ತೆ. ಆದರೆ ನಮ್ಮ ಸಂಸ್ಕೃತಿಯಲ್ಲಿ ಅದಲ್ಲ. ಆದರೆ ನಿಮ್ಮಷ್ಟು ಸಣ್ಣತನಕ್ಕೆ ನಾನು ಇಳಿಯಲ್ಲ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ರಾಮನಗರಕ್ಕೆ ಬರುವ 15 ವರ್ಷಗಳ ಮೊದಲೇ ಚಲನಚಿತ್ರ ವಿತರಕನಾಗಿ ಕೇತಗಾನಹಳ್ಳಿಯಲ್ಲಿ 45 ಎಕರೆ ಆಸ್ತಿ ಖರೀದಿಸಿದ್ದೇನೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದುಡ್ಡು ಹೊಡೆಯುವ ಕೆಲಸ ಮಾಡಿಲ್ಲ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here