ಹುಬ್ಬಳ್ಳಿ:- ರಸ್ತೆಬದಿ ನಿಂತಿದ್ದ ಎಲೆಕ್ಟ್ರಿಕಲ್ ಬೈಕ್ ಬೆಂಕಿಗಾಹುತಿಯಾಗಿರುವ ಘಟನೆ ಹುಬ್ಬಳ್ಳಿಯ ಕೇಶವಕುಂಜದ ಸಮೀಪದಲ್ಲಿ ಜರುಗಿದೆ.
Advertisement
ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಓಲಾ ಕಂಪನಿಯ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಹೊತ್ತಿ ಉರಿದ ಪರಿಣಾಮ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಇನ್ನೂ ಘಟನೆಯಲ್ಲಿ ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಅಲ್ಲದೇ ಎಲೆಕ್ಟ್ರಿಕ್ ಬೈಕ್ ಮಳೆಗಾಲದಲ್ಲಿ ಎಷ್ಟು ಸೇಫ್ ಎಂದು ಜನರು ತಮ್ಮಷ್ಟಕ್ಕೇ ತಾವೇ ಮಾತನಾಡಿಕೊಳ್ಳುತ್ತಿದ್ದು, ಬೈಕ್ ಸವಾರರಲ್ಲಿ ಆತಂಕ ಮನೆ ಮಾಡಿದೆ.