ಹುಬ್ಬಳ್ಳಿ: ಎರಡು ದಿನಗಳ ಹಿಂದಷ್ಟೇ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದ ಹಿರಿಯ ನಾಯಕ ಬಸವರಾಜ ಹೊರಟ್ಟಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ.
ಹೌದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ. 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ. ಆದ್ದರಿಂದ ರಾಜೀನಾಮೆ ಅಲ್ಲಿಗೆ ಕೈ ಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಅನ್ ಸೈನಡ್ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ . 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ಅದನ್ನ ಅಲ್ಲಿಗೆ ಕೈ ಬಿಟ್ಟಿದ್ದೇನೆ. ಬೆಂಗಳೂರಲ್ಲಿ ಸಭೆ ಮಾಡೋದಾಗಿ ಅಂದು ಕೊಂಡಿದ್ದೇವೆ.
ಎಲ್ಲರೂ ಸಹ ನೀವೇ ರಾಜೀನಾಮೆ ಕೊಡಬೇಡಿ ಎಂದು ಹೇಳುತ್ತಿದ್ದಾರೆ. ನಾನು ಮಾಡಿದ ತೀರ್ಮಾನಕ್ಕೆ ವಿರೋಧ ಬಂತು . ನಮ್ಮ ಶಾಸನ ಸಭೆ ಸದಸ್ಯರು ನೋಡೋಣ ರಾಜೀನಾಮೆ ಬೇಡ ಎಂದಿದ್ದಾರೆ. ಪುಟ್ಟಣ್ಣ ಕರೆ ಮಾಡಿ ರಾಜೀನಾಮೆ ವಿಷಯದಲ್ಲಿ ಮುಂದುವರಿಬೇಡಿ ಅಂದ್ರು. ಸಾರ್ವಜನಿಕ ವಲಯದಲ್ಲಿ ನನಗೆ ಇಷ್ಟೊಂದು ಗೌರವ ಕೊಡುತ್ತಿರುವುದಕ್ಕೆ ನಾನು ರಾಜೀನಾಮೆಯಿಂದ ಹಿಂದೆ ಸರಿದಿದ್ದೇನೆ ಎಂದು ಬಸವರಾಜ್ ಹೊರಟ್ಟಿ ಹೇಳಿದರು.