ಹುಬ್ಬಳ್ಳಿ: ಕರ್ನಾಟಕದಾದ್ಯಂತ ಭಾರೀ ಸುದ್ದಿಯಾಗಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಫಯಾಜ್ ಗೆ ಕೋರ್ಟ್ ಶಾಕ್ ಕೊಟ್ಟಿದೆ. ಕಾಲೇಜಿನೊಳಗೆ ನುಗ್ಗಿ ನೇಹಾಳನ್ನು ಹತ್ಯೆಗೈದಿದ್ದ ಫಯಾಜ್ ಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಹ ತಿರಸ್ಕೃತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಹಂತಕ ಫಯಾಜ್ ಗೆ ಜೈಲೇ ಗತಿyA.
2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಫಯಾಜ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ಸಂಬಂಧ ಜೈಲಿನಲ್ಲಿರುವ ಫಯಾಜ್, ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.
ಈ ಅರ್ಜಿ ವಿಚಾರಣೆ ನಡೆಸಿದ್ದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಕೋರ್ಟ್, ಜಾಮೀನು ನೀಡಲು ನಿರಾಕರಿಸಿತ್ತು. ಈ ಸಂಬಂಧ ಇದನ್ನ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದ. ಆದ್ರೆ, ಇಂದು ಧಾರವಾಡ ಕೋರ್ಟ್ ಸಹ ಫಯಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.



