ಹುಬ್ಬಳ್ಳಿ: ಮಹಿಳೆಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ಅದರ ವಿಡಿಯೋ ಮಾಡಿದ್ದ ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಶಿವಾನಂದ ಮತ್ತು ಗಣೇಶ್ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಸಂತ್ರಸ್ತೆಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಜ.9ರಂದು ಅಂಬೇಡ್ಕರ್ ಮೈದಾನದಿಂದ ಆಟೋದಲ್ಲಿ ಮಹಿಳೆಯನ್ನು ಕರೆದೊಯ್ದು ಮದ್ಯ ಕುಡಿಸಿ ದುಷ್ಕೃತ್ಯ ನಡೆಸಿ ವಿಡಿಯೋ ಮಾಡಿಕೊಂಡು ಹರಿಬಿಟ್ಟಿದ್ದಾರೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಪ್ರಕರಣದ ಬಳಿಕ ಆರೋಪಿಗಳನ್ನು ಸ್ಥಳೀಯರು ಥಳಿಸಿ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದು, ಈ ಹಲ್ಲೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧವೂ ದೂರು ದಾಖಲಾಗಿದೆ. ಆರೋಪಿಗಳನ್ನು ಹಿಡಿದುಕೊಟ್ಟವರ ವಿರುದ್ಧ ಕೇಸ್ ಹಾಕಿರುವುದನ್ನು ಖಂಡಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.



