ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ ಕೇಸ್: ಚಿಕಿತ್ಸೆ ಫಲಿಸದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು!

0
Spread the love

ಹುಬ್ಬಳ್ಳಿ:- ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ ಕೇಸ್ ಗೆ ಸಂಬಧಪಟ್ಟಂತೆ ಗಂಭೀರ ಗಾಯಗೊಂಡಿದ್ದ ಒಂಭತ್ತು ಅಯ್ಯಪ್ಪ ಮಾಲಾಧಾರಿಗಳಲ್ಲಿ ಇಬ್ಬರು ಚಿಕಿತ್ಸೆ ಫಲಿಸದೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Advertisement

58 ವರ್ಷದ ನಿಜಲಿಂಗಪ್ಪ ಬೇಪುರಿ, 18 ವರ್ಷದ ಸಂಜಯ್​​ ಸವದತ್ತಿ ಮೃತಪಟ್ಟ ಮಾಲಾಧಾರಿಗಳು. ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ.

ಇನ್ನುಳಿದ 7 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here