ಹುಬ್ಬಳ್ಳಿ: ವಿದ್ಯಾಭ್ಯಾಸದಲ್ಲಿ ಹಿಂದೆ ಇದ್ದ ಅನ್ನೋ ಕಾರಣಕ್ಕೆ ಗಣೇಶ ಹಬ್ಬಕ್ಕೆ ಬಂದಿದ್ದ NTTF ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ. 19 ವರ್ಷದ ಪ್ರಸಾದ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದು, NTTF ಮೂರನೇ ಸೆಮಿಸ್ಟರ್ ಓದುತ್ತಿದ್ದ ಪ್ರಸಾದ್, ನಾಗ ಶೆಟ್ಟಿಕೊಪ್ಪದ ನಿವಾಸದಲ್ಲಿ ತಡರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡನೇ ಸೆಮಿಸ್ಟರ್ ನಲ್ಲಿ ಕೆಲ ವಿಷಯಗಳಲ್ಲಿ ಫೇಲ್ ಆಗಿದ್ದ ಪ್ರಸಾದ್,
ವಿದ್ಯಾಭ್ಯಾಸದಲ್ಲಿ ಹಿಂದೆ ಇದ್ದ ಅನ್ನೋ ಕಾರಣಕ್ಕೆ ಮನನೊಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಾಗಿದ್ದು, ನಿನ್ನೆ ರಾತ್ರಿ ತಂದ ತಾಯಿ ಯೊಂದಿಗೆ ಊಟ ಮಾಡಿ ಮಲಗಿದ್ದನು. ಆದ್ರೆ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾಹಿತಿ ಪಡೆದಿದ್ದಾರೆ. ಇನ್ನೂ ಘಟನೆ ಸಂಬಂಧ ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.