ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಜಿಲ್ಲೆಯ ವಿವಿಧ ಹಿಂದೂ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ದಾಸಶ್ರೇಷ್ಠ ಭಕ್ತ ಕನಕದಾಸರ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಜಯಂತೋತ್ಸವದ ಪ್ರಯುಕ್ತ ನ. 8ರಂದು ಸಂಜೆ 5 ಗಂಟೆಗೆ ಶಿರಹಟ್ಟಿಯ ಎಫ್.ಎಂ. ಡಬಾಲಿ ಪ್ರೌಢಶಾಲಾ ಮೈದಾನದಲ್ಲಿ ಬೃಹತ್ ಹಿಂದೂ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾ ಹಿಂದೂ ಸಂಘಟನೆಯ ಅಧ್ಯಕ್ಷ ಸಂತೋಷ ಕುರಿ ಹೇಳಿದರು.
ಅವರು ಬುಧವಾರ ಶಿರಹಟ್ಟಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಜಯಂತೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಅಂದಿನ ಕಾರ್ಯಕ್ರಮಕ್ಕೆ ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ, ಮಾಜಿ ಕೇಂದ್ರ ಸಚಿವ ಹಾಗೂ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶ್ರೀರಾಮ ಸೇನೆಯ ರಾಜ್ಯ ಸಂಚಾಲಕ ರಾಜು ಖಾನಪ್ಪನವರ ಸೇರಿದಂತೆ ರಾಜ್ಯ ಮಟ್ಟದ ನಾಯಕರು ಆಗಮಿಸಲಿದ್ದು, ಜಿಲ್ಲೆಯ ಹಿಂದೂ ಸಮಾಜ ಬಾಂಧವರು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ, ರಾಜೀವರಡ್ಡಿ ಬಮ್ಮನಕಟ್ಟಿ, ಯಲ್ಲಪ್ಪ ಇಂಗಳಗಿ, ಸಂತೋಷ ತೋಡೆಕರ, ಪ್ರಕಾಶ ಕಲ್ಯಾಣಿ ಮುಂತಾದವರು ಉಪಸ್ಥಿತರಿದ್ದರು.



