ಆಭರಣ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ.. 10 ಗ್ರಾಂಗೆ ಎಷ್ಟು ಹೆಚ್ಚಳ ಆಗಿದೆ ಗೊತ್ತಾ?

0
Spread the love

ಭಾರತ ಸೇರಿ ವಿಶ್ವದಲ್ಲಿಯೇ ಚಿನ್ನಕ್ಕೆ ಚಿನ್ನ ಮಾತ್ರವೇ ಸಾಟಿ ಎನ್ನುವಂತಾಗಿದೆ. ಇತ್ತೀಚಿನ ವರ್ಷಗಳಲ್ಲಿ ಯಾರೂ ಊಹಿಸದ ರೀತಿಯಲ್ಲಿ ಚಿನ್ನ ತನ್ನ ಬೆಲೆ ಹೆಚ್ಚಿಸಿಕೊಂಡಿದೆ. ಬೇರೆ ದೇಶಗಳಿಗೆ ಹೋಲಿಸಿದೆರೆ, ಭಾರತೀಯರಿಗೆ ಅದರಲ್ಲೂ ಮಹಿಳೆಯರಿಗೆ ಚಿನ್ನ ಅಂದರೆ ಪ್ರೀತಿ. ಯಾವುದೇ ಸಮಾರಂಭ ಇರಲಿ, ಹಬ್ಬವಿರಲಿ ಅವರು ಮೊದಲು ಕೇಳುವುದೇ ಚಿನ್ನ. ಈ ಹಬ್ಬಕ್ಕಾದ್ರೂ ಒಂದು ಸ್ವಲ್ಪ ಬಂಗಾರ ತೆಗೆದುಕೊಳ್ಳೋಣ ಅನ್ನೋ ಬೇಡಿಕೆ ಇವರ ಬಾಯಲ್ಲಿ ಬರುತ್ತದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಮುಂದುವರಿಯುತ್ತಲೇ ಇದೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಹೆಚ್ಚಿದೆ. ಬೆಳ್ಳಿ ಬೆಲೆ 1 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 11,795 ರೂನಿಂದ 11,815 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,889 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 190 ರೂಗೆ ಏರಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,18,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,28,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,18,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,700 ರೂ ಇದೆ.

Advertisement

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 15ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,889 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,815 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,697 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,889 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,815 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,815 ರೂ
  • ಚೆನ್ನೈ: 11,815 ರೂ
  • ಮುಂಬೈ: 11,815 ರೂ
  • ದೆಹಲಿ: 11,830 ರೂ
  • ಕೋಲ್ಕತಾ: 11,815 ರೂ
  • ಕೇರಳ: 11,815 ರೂ
  • ಅಹ್ಮದಾಬಾದ್: 11,820 ರೂ
  • ಜೈಪುರ್: 11,830 ರೂ
  • ಲಕ್ನೋ: 11,830 ರೂ
  • ಭುವನೇಶ್ವರ್: 11,815 ರೂ

Spread the love

LEAVE A REPLY

Please enter your comment!
Please enter your name here