ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಗ್ರಾಮ ಗಂಗೋತ್ರಿ ಸಭಾಂಗಣದಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲರು ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಜರುಗಲಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮದ ಕುರಿತಾದ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದರು.
ಪ್ರಜಾಪ್ರಭುತ್ವದ ಆಶಯಗಳನ್ನು ಗಟ್ಟಿಗೊಳಿಸಲು ಗದಗ ಜಿಲ್ಲೆಯಲ್ಲಿ ಸುಮಾರು 61 ಕಿಲೋಮೀಟರ್‌ಗಳ ಮಾನವ ಸರಪಳಿಯನ್ನು ಅಂದಾಜು 52 ಸಾವಿರ ಜನರು ಭಾಗವಹಿಸುವುದರ ಮೂಲಕ ಆಚರಿಸಲಿದ್ದಾರೆ.
ಸಂವಿಧಾನ ಪೀಠಿಕೆಯನ್ನು ಓದಿ ರಾಷ್ಟ್ರಗೀತೆಯನ್ನು ಹೇಳಿ, ಘೋಷಣೆಗಳೊಂದಿಗೆ ಈ ವಿಶಿಷ್ಠ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಚಿವರು ಕರೆ ನೀಡಿದರು.
ಈ ಸಂದರ್ಭದಲ್ಲಿ ವಿ.ಪ ಸಭಾಪತಿ ಬಸವರಾಜ ಹೊರಟ್ಟಿ, ವಿ.ಪ ಸದಸ್ಯ ಎಸ್.ವಿ. ಸಂಕನೂರು, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ವಿಶ್ವವಿದ್ಯಾಲಯದ ಕುಲ ಸಚಿವರು ಮತ್ತು ಸಿಬ್ಬಂದಿ ವರ್ಗದವರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್ ಪೋತದಾರ ಹಾಜರಿದ್ದರು.