HomeGadag Newsಬಿಸಿಯೂಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

ಬಿಸಿಯೂಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

For Dai;y Updates Join Our whatsapp Group

ಗದಗ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ನೂರಾರು ವಿದ್ಯಾರ್ಥಿಗಳು ವಾಂತಿ, ಬೇಧಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬೀಡನಾಳ ಗ್ರಾಮದಲ್ಲಿ ನಡೆದಿದೆ.

ಬೀಡನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂದಿನಂತೆ ಶನಿವಾರ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗಿತ್ತು. ಊಟ ಸೇವಿಸಿದ ಕೆಲವೇ ಹೊತ್ತಿನಲ್ಲಿ ಹಲವು ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೆಲವೇ ಸಮಯದಲ್ಲಿ ಹೆಚ್ಚಿನ ಮಕ್ಕಳು ಅಸ್ವಸ್ಥರಾಗಿದ್ದು, ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ತಕ್ಷಣ ಶಿಕ್ಷಕರು ಹಾಗೂ ಗ್ರಾಮಸ್ಥರು ಅಲರ್ಟ್ ಆಗಿ ಮಕ್ಕಳನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಅಸ್ವಸ್ಥ ವಿದ್ಯಾರ್ಥಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಮಕ್ಕಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಪಾಲಕರು ಆತಂಕಗೊಂಡು ಕಣ್ಣೀರಿಟ್ಟರು. ಮಕ್ಕಳ ಸ್ಥಿತಿ ಕಂಡು ಪಾಲಕರಲ್ಲಿ ಆತಂಕ ಮನೆಮಾಡಿದ್ದು, ಶಾಲೆಯ ಬಿಸಿಯೂಟದ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಸಿಯೂಟದಲ್ಲಿ ಹಲ್ಲಿ ಬಿದ್ದಿತ್ತು ಎಂಬ ಆರೋಪವೂ ಕೇಳಿಬಂದಿದ್ದು, ಇದರಿಂದಲೇ ಮಕ್ಕಳು ಅಸ್ವಸ್ಥರಾಗಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಿಸಿಯೂಟ ಸಿಬ್ಬಂದಿ ಹಾಗೂ ಶಾಲಾ ಶಿಕ್ಷಕರ ವಿರುದ್ಧವೂ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ನಿಖರ ಕಾರಣ ವೈದ್ಯಕೀಯ ಪರಿಶೀಲನೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ತನಿಖೆಯಿಂದ ತಿಳಿದುಬರಬೇಕಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img