ಬೇಡಿಕೆ ಈಡೇರಿಕೆಗೆ ಉಪವಾಸ ಸತ್ಯಾಗ್ರಹ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರದ ನವೀಕೃತ ರೈಲು ನಿಲ್ದಾಣಕ್ಕೆ ಪದ್ಮಭೂಷಣ ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಹೆಸರನ್ನು ನಾಮಕರಣ ಮಾಡಬೇಕೆಂದು ಆಗ್ರಹಿಸಿ, ಸೆ. 1ರಂದು ರೈಲು ನಿಲ್ದಾಣದ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕರ್ನಾಟಕ ರಾಜ್ಯ ಡಾ. ಪಂ. ಪುಟ್ಟರಾಜ ರೈತ ಸಂಘದ ರಾಜ್ಯಾಧ್ಯಕ್ಷ ಎಂ.ಪಿ. ಮುಳಗುಂದ ತಿಳಿಸಿದರು.

Advertisement

ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈಲ್ವೆ ನಿಲ್ದಾಣಕ್ಕೆ ಪುಟ್ಟರಾಜರ ಹೆಸರಿಡಲು ಒತ್ತಾಯಿಸಿ ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದೆ. ಈವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮಲ್ಲಸಮುದ್ರದ ಫಕ್ಕಿರೇಶ್ವರ ಸ್ವಾಮೀಜಿ ಮಾತನಾಡಿ, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢ ಮತ್ತು ತುಮಕೂರು ರೈಲು ನಿಲ್ದಾಣಕ್ಕೆ ಶ್ರೀ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡಿದಂತೆ, ಪಂ. ಪುಟ್ಟರಾಜ ಗವಾಯಿಗಳ ಹೆಸರನ್ನು ಗದಗ ರೈಲು ನಿಲ್ದಾಣಕ್ಕೆ ಇಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದರು.

ಪಂ. ಪುಟ್ಟರಾಜ ಗವಾಯಿಗಳು ಸಾವಿರಾರು ಅಂಧ ಮತ್ತು ಅನಾಥ ಮಕ್ಕಳಿಗೆ ಆಶ್ರಯ, ಶಿಕ್ಷಣ ಹಾಗೂ ಸಂಗೀತ ಜ್ಞಾನ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿದ್ದಾರೆ. ಅವರ ಈ ಮಹೋನ್ನತ ಸೇವೆಯನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಅಷ್ಪಾಕ್‌ಅಲಿ ಹೊಸಳ್ಳಿ, ಗೌರವಾಧ್ಯಕ್ಷ ಅಶೋಕ ಬಸೆಟ್ಟಿ, ಎಂ.ಎಸ್. ಪರ್ವತಗೌಡ್ರ, ರಘುನಾಥರೆಡ್ಡಿ ಹುಚ್ಚಣ್ಣವರ, ಜಾನಪದ ಕಲಾವಿದ ಗವಿಸಿದ್ದಯ್ಯ ಹಳ್ಳಿಕೇರಿಮಠ ಉಪಸ್ಥಿತರಿದ್ದರು.

ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಗುಡದೂರ ಮಾತನಾಡಿ, ಸೆ. 1ರಂದು ಬೆಳಗ್ಗೆ 8.30ಕ್ಕೆ ಉಪವಾಸ ಸತ್ಯಾಗ್ರಹ ಆರಂಭವಾಗಲಿದೆ. ನಮ್ಮ ಹೋರಾಟಕ್ಕೆ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಬೇಕು ಎಂದು ವಿನಂತಿಸಿದರು.


Spread the love

LEAVE A REPLY

Please enter your comment!
Please enter your name here