ಬೀದರ್:- ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿದ ಲೋಕಾ ತಂಡವು ಬೀದರ್ ನಲ್ಲಿ ಏಕಕಾಲಕ್ಕೆ ಮೂರು ಕಡೆಗೆ ದಾಳಿ ಮಾಡಿದೆ.
ಇಲ್ಲಿರುವ ಬೆಂಗಳೂರು ಹೆದ್ದಾರಿ ಅಭಿವೃದ್ಧಿ ಇಲಾಖೆಯ ಮುಖ್ಯ ಯೋಜನಾಧಿಕಾರಿ ನಿವಾಸ, ಲೋಕೋಪಯೋಗಿ ಚೀಫ್ ಇಂಜಿನಿಯರ್ ಮನೆ, ಜಗನ್ನಾಥ ವೈಜನಾಥ್ ಸಹೋದರ ನಾಗನಾಥ್ ಹಾಲಿಂಗೆ ನಿವಾಸ, ಲೋಕೋಪಯೋಗಿ ಇಲಾಖೆಯ ಹೆದ್ದಾರಿ ಪ್ಲಾನಿಂಗ್ ಅಧಿಕಾರಿ ನಿವಾಸಗಳ ಮೇಲೆ ದಾಳಿ ಮಾಡಿ ಮಹತ್ತರ ದಾಖಲೆ ಪರಿಶೀಲಿಸಿತು.
ಕಲಬುರಗಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಅರೋಪದ ಮೇಲೆ ಇಲ್ಲಿನ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ದಾಳಿ ನಡೆದಿದ್ದು, ಬೀದರ್ ನಗರದ ಸಾಹೇಬ್ ನಗರ, ಭಾಲ್ಕಿಯ ನಿವಾಸ, ಹಾಗೂ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.



