ಬೆಂಗಳೂರು:- ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಬೆನ್ನಲ್ಲೇ ಕರ್ನಾಟಕದಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ ಶುರುವಾಗಿದೆ. ಮೊದಲ ಬಾರಿಗೆ ಪರೀಕ್ಷಾ ಅಕ್ರಮ ತಡೆಗೆ KEA ಹೊಸ ತಂತ್ರಜ್ಞಾನ ಬಳಕೆ ಮಾಡಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಕ್ಯೂಆರ್ ಸ್ಕ್ಯಾನ್ ಮಾಡಿದ ನಂತರವೇ ವಿದ್ಯಾರ್ಥಿಗಳನ್ನು ಎಕ್ಸಾಂ ಹಾಲ್‌ಗೆ ಕಳುಹಿಸಲಾಗುವುದು. ಈ ಮೂಲಕ ಡೂಪ್ಲಿಕೇಟ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ತಪ್ಪಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದೆ.
ಸಿಇಟಿ ಪರೀಕ್ಷೆಯಿಂದ ಹಿಡಿದು ದಾಖಲಾತಿಯಾಗುವವರೆಗೂ ಕೆಇಎ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಇರಲಿದ್ದು, ಸೀಟ್ ಬ್ಲಾಕ್ ಸೇರಿದಂತೆ ಇನ್ನಿತರ ಅಕ್ರಮ ತಡೆಗೆ ಹೊಸ ತಂತ್ರಜ್ಞಾನ ಬಳಸಲು ನಿರ್ಧರಿಸಿದೆ.
ಏನಿದು ಕ್ಯೂಆರ್ ಸ್ಕ್ಯಾನ್ ?
* ಪ್ರತಿ ಕೇಂದ್ರದಲ್ಲೂ ವಿದ್ಯಾರ್ಥಿಗಳಿಗೆ ಕ್ಯೂಆರ್ ಸ್ಕ್ಯಾನ್ ಮೂಲಕ ತಪಾಸಣೆ.
* ಪ್ರತಿ ಕೇಂದ್ರದ ಮುಖ್ಯಸ್ಥರಿಗೆ ಕ್ಯೂಆರ್ ಸ್ಕ್ಯಾನ್ ಮಾಡಲು ಆಪ್ ವ್ಯವಸ್ಥೆ ಮಾಡಲಾಗಿರುತ್ತದೆ.
* ಕ್ಯೂಆರ್ ಸ್ಕ್ಯಾನ್‌ನಲ್ಲಿ ಮೊದಲೇ ವಿದ್ಯಾರ್ಥಿ ಮಾಹಿತಿಯನ್ನು ಕೆಇಎ ಅಪ್‌ಲೋಡ್ ಮಾಡಿರುತ್ತದೆ.
* ವಿದ್ಯಾರ್ಥಿಗಳನ್ನ ಸ್ಕ್ಯಾನ್ ಮಾಡಿದ ಕೂಡಲೇ ವಿದ್ಯಾರ್ಥಿಯ ಸಂಪೂರ್ಣ ಮಾಹಿತಿ ಕೆಇಎಗೆ ತಲುಪುತ್ತದೆ.
* ಒಂದು ವೇಳೆ ಬೇರೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾದರೆ ಇದರಿಂದ ಪತ್ತೆ ಹಚ್ಚಬಹುದು.
* ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಸ್ಕ್ಯಾನ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.
* ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಲಾಗಿದೆ.
* ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿ ಕೂಡ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ.
* ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ.
.