ಕಲಬುರಗಿ: ಜಿಲ್ಲೆಯ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಹಿಜಾಬ್ ಧರಿಸಿ ಬಣ್ಣ ಆಡಿ, ಅನುಚಿತವಾಗಿ ವರ್ತನೆ ತೋರಿದ ಕೆಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮುಸ್ಲಿಂ ಮಹಿಳೆಯರು ಧರಿಸುವ ಹಿಜಾಬ್ ಕುರಿತು ವ್ಯಂಗ್ಯ ಮಾಡಲಾಗಿದೆ ಎಂದು ಆರೋಪಿಸಿ, ಸಮೀರ್ ಎಂಬುವವರು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದು, ಪ್ರಜ್ವಲ್, ಶಾಂತಪ್ಪ, ನಾಗರಾಜ್, ಅನಿಲ್, ಚೆನ್ನು ಸೇರಿ ಕೆಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಎಫ್ ಐ ಆರ್ನಲ್ಲಿ ಆರೋಪಿಗಳು ನಮ್ಮ ಧಾರ್ಮಿಕ ಭಾವನೆಗಳಿಗೆ ದಕ್ಕೆ ತಂದು, ಹಿಜಾಬ್ ಧರಿಸಿ ಅನುಚಿತ ವರ್ತನೆ ತೋರಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ, ಘಟನೆಗೆ ಸಂಬಂಧಿಸಿದಂತೆ ತಪಾಸಣೆ ಮತ್ತು ಪರಿಶೀಲನೆ ನಡೆಯುತ್ತಿದೆ.



