ಮದುವೆಯಾದ ಎರಡೇ ತಿಂಗಳಿಗೆ ಗಂಡ ನಾಪತ್ತೆ..ಮಾನಸಿಕ ಸ್ಥಿಮಿತ ಕಳೆದುಕೊಂಡ ಪತ್ನಿ: ಕೈಗಳನ್ನು ಹಗ್ಗದಿಂದ ಕಟ್ಟಿದ ಪೋಷಕರು!

0
Spread the love

ಬಾಗಲಕೋಟೆ:- ಮದುವೆಯಾಗಿ ಕೇವಲ ಎರಡು ತಿಂಗಳಿಗೆ ಗಂಡ ನಾಪತ್ತೆ ಆಗಿದ್ದು, ಇದರಿಂದ ಶಾಕ್‌ಗೆ ಒಳಗಾಗಿರುವ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಈ ಘಟನೆ ಬಾಗಲಕೋಟೆಯ ಜಿಲ್ಲೆಯ ಇಳಕಲ್ ತಾಲ್ಲೂಕಿನ ವಡಗೇರಿ ಗ್ರಾಮದಲ್ಲಿ ಜರುಗಿದೆ.

Advertisement

ಮಾನಸಿಕ ಸ್ಥಿಮಿತ ಕಳೆದುಕೊಂಡ ಮಹಿಳೆ ಸ್ಥಿತಿ ಎಂತವರ ಕಣ್ಣಲ್ಲೂ ನೀರು ತರಿಸುತ್ತಿದೆ. ಬರೊಬ್ಬರಿ ಏಳು ವರ್ಷದಿಂದ ದನದ ಕೊಟ್ಟಿಗೆಯಲ್ಲಿ ಹಗ್ಗ ಕಟ್ಟಿ ಆಕೆಯನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಮಹಿಳೆಯ ಹೆಸರು ಶಂಕ್ರವ್ವ ಸೇಬಿನಕಟ್ಟಿ (26). ಕಳೆದ ಏಳು ವರ್ಷದಿಂದ ಈಕೆಯನ್ನು ಗೃಹಬಂಧನದಲ್ಲಿ ಇಡಲಾಗಿದೆ. ಈಕೆಯ ಈ ಸ್ಥಿತಿಗೆ ಪತಿ ನಾಪತ್ತೆಯಾಗಿರುವುದು ಕಾರಣವಾಗಿದೆ.

ವಡಗೇರಿ ಗ್ರಾಮದ ಶಂಕ್ರವ್ವ ಹಾಗೂ ಗೂಡೂರು ಗ್ರಾಮದ ಪಿಡ್ಡಪ್ಪರ ಮದುವೆ 2018 ಫೆಬ್ರುವರಿ 14 ಪ್ರೇಮಿಗಳ ದಿನದಂದು ನಡೆದಿತ್ತು. ನವಜೋಡಿಗಳು ಸಂಭ್ರಮದಿಂದ ಸುಂದರ ಸಂಸಾರಕ್ಕೆ ಕಾಲಿಟ್ಟಿದ್ದರು. ಆದರೆ‌ ಮದುವೆಯಾದ ಎರಡು ತಿಂಗಳ ನಂತರ ಅದೊಂದು ದಿನ ಬೆಳಿಗ್ಗೆ ಮನೆಯಿಂದ ಹೋದ ಪಿಡ್ಡಪ್ಪ ಇಂದಿಗೂ ವಾಪಸ್ ಬಂದಿಲ್ಲ. ಬದುಕಿದ್ದಾರಾ ಅಥವಾ ಮೃತಪಟ್ಟಿದ್ದಾರಾ ಅನ್ನೋದು ಗೊತ್ತಿಲ್ಲ. ಯಾವಾಗ ಗಂಡ ವಾಪಸ್ ಬರಲಿಲ್ಲವೊ, ಗಂಡನ ಮೇಲೆ ಅಪಾರ ಪ್ರೀತಿ ಇಟ್ಕೊಂಡಿದ್ದ ಶಂಕ್ರವ್ವ ಶಾಕ್​ಗೆ ಒಳಗಾಗಿದ್ದಾರೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಏಳು ವರ್ಷದಿಂದ ಮಾನಸಿಕತೆಯಿಂದ ಬಳಲುತ್ತಿದ್ದಾರೆ.

ನಿತ್ಯ ತನ್ನ ತಾಯಿ ಮೇಲೆ‌ ಹಲ್ಲೆ ಮಾಡುವುದು, ಊರಲ್ಲಿ ಬಿಟ್ಟರೆ ಎಲ್ಲೆಂದರಲ್ಲಿ ಹೋಗುವುದು, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆ. ಇದರಿಂದ ಅನಿವಾರ್ಯವಾಗಿ ಈಕೆಯನ್ನು ದನದ ಕೊಟ್ಟಿಗೆಯಲ್ಲಿ ಹಗ್ಗದಿಂದ ಎರಡು ಕೈಕಟ್ಟಿ ಗೃಹಬಂಧನದಲ್ಲಿ ಇರಿಸಲಾಗಿದೆ. ಮಗಳನ್ನು ಯಾರಾದರೂ ಈ ರೀತಿ ಕಟ್ಟುತ್ತಾರಾ ಎಂದು ಕೇಳಿದರೆ, ಏನು ಮಾಡುವುದು ಬಿಟ್ಟರೆ ನನ್ನ ಮೇಲೆ‌ ಹಲ್ಲೆ ಮಾಡುತ್ತಾಳೆ. ಬಾವಿಗೆ ಹಾರುವುದಕ್ಕೆ ಹೋಗುತ್ತಾಳೆ. ಏನು ಮಾಡುವುದು. ಅದಕ್ಕಾಗಿ ಇದು ಅನಿವಾರ್ಯ ಅಂತ ತಾಯಿ ದೇವಕ್ಕ ಕಣ್ಣೀರು ಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here