ಚಿಕ್ಕೋಡಿ:- ಮಹಿಳೆ ಕೊಲೆಗೈದು ಬಳಿಕ ಅಪಘಾತ ಎಂದು ಬಿಂಬಿಸಿದ್ದ ಪತಿ, ಮಾವ, ಅತ್ತೆಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಕ್ಕಳಾಗಿಲ್ಲ ಎಂದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಇದು ಕೊಲೆಯಲ್ಲ ಬೈಕ್ ಅಪಘಾತವೆಂದು ಆರೋಪಿಗಳು ಬಿಂಬಿಸಿದರು. ಅನುಮಾನದ ಮೇರೆಗೆ ತನಿಖೆ ಕೈಗೊಂಡ ಪೊಲೀಸರಿಗೆ ಕೊಲೆ ಎಂದು ತಿಳಿದು ಬಂದಿದೆ.
Advertisement
ರೇಣುಕಾ ಸಂತೋಷ ಹೋನಕಾಂಡೆ (27) ಮೃತ ಮಹಿಳೆ. ಶನಿವಾರ ತಡ ರಾತ್ರಿ ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹಾಗೂ ಅತ್ತೆ ಜಯಶ್ರೀಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಅಥಣಿಯಿಂದ ಬೈಕ್ ಮೇಲೆ ಹೊರಟಾಗ ಬೈಕ್ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಹೊರಟ ಹಂತಕರನ್ನ ಸಂಶಯಾಸ್ಪದವಾಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಅಪಘಾತವಲ್ಲ ಕೊಲೆ ಎಂದು ಬೆಳಕಿಗೆ ಬಂದಿದೆ.