ಬೆಂಗಳೂರು:- ಪಾಪಿ ಪತಿಯೋರ್ವ ಪತ್ನಿ ಕೊಂದು ಶವ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿ ಎಸ್ಕೇಪ್ ಆಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
Advertisement
ಹುಳಿ ಮಾವು ಪೋಲಿಸ್ ಠಾಣಾ ವ್ಯಾಪ್ತಿಯ ದೊಡ್ಡಕಮ್ಮನಹಳ್ಳಿಯ ವಾಲ್ ಮಾರ್ಕ್ ಅಪಾರ್ಟ್‌ಮೆಂಟ್ ಮುಂಭಾಗ ಘಟನೆ ಜರುಗಿದ್ದು, ಕಳೆದು ಮೂರು ದಿನಗಳ ಹಿಂದೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ವಾಸನೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸೂಟ್ ಕೇಸ್ ಪರಿಶೀಲಿಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.