ಬೆಂಗಳೂರು: ಪತ್ನಿ ಮೇಲೆ ಅನುಮಾನ ಪಟ್ಟು ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘೋರ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊತ್ತನೂರಿನ ಮಾರಮ್ಮನ ದೇಗುಲ ಬಳಿ ನಡೆದಿದೆ. ಪ್ರಭು ಜಂಗ್ಲಿ (26) ಎಂಬಾತನಿಂದ ಪತ್ನಿ ಪ್ರಿಯಾಂಕಾ (24) ಹತ್ಯೆಗೆ ಯತ್ನ ಮಾಡಲಾಗಿದ್ದು,
ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಆಡುತ್ತಿದ್ದನು. ಮೊನ್ನೆ ಸಂಜೆ ಪೆಟ್ರೋಲ್ ತಂದು ಪತ್ನಿ ಮೇಲೆ ಸುರಿದು ತಾನೂ ಸುರಿದುಕೊಂಡಿದ್ದ ಪ್ರಭು ತಾನೂ ಬೆಂಕಿ ಹಚ್ಚಿಕೊಂಡು ಪತ್ನಿಗೂ ಬೆಂಕಿ ಹಾಕಿದ್ದನು. ಬೆಂಕಿ ಉರಿ ತಾಳಲಾರದೆ ಮನೆಯಿಂದ ಹೊರಗಡೆ ಓಡಿ ಬಂದಿದ್ದನು.
ಇಬ್ಬರನ್ನು ರಕ್ಷಿಸಿದ ಸ್ಥಳೀಯರು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆರೋಪಿ ಪ್ರಭು ವಿರುದ್ದ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಇಬ್ಬರಿಗೂ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.