ಹೈದರಾಬಾದ್ ವೋಲ್ವೊ ಬಸ್ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

0
Spread the love

ನವದೆಹಲಿ: ಆಂಧ್ರದ ಕರ್ನೂಲ್‌  ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ  ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Advertisement

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತರ ಕುಟುಂಬಗಳೊಂದಿಗೆ ನಿಲ್ಲುತ್ತೇವೆ.

ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿ ಬೆಂಕಿ ಆವರಿಸಿಕೊಂಡು 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here