ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ನನ್ನ ವಿರೋಧವಿದೆ: ಶಾಸಕ ಯತ್ನಾಳ್

0
Spread the love

ವಿಜಯಪುರ: ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇಂದು ಮುಖಾಮುಖಿಯಾಗುತ್ತಿವೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹೈವೋಲ್ಟೆಜ್ ಕದನ ನಡೆಯಲಿದೆ. ಏಷ್ಯಾಕಪ್​ನಲ್ಲಿ ತಲಾ ಒಂದು ಪಂದ್ಯ ಗೆದ್ದಿರುವ ಉಭಯ ತಂಡಗಳು ಗೆಲ್ಲುವ ನಿರೀಕ್ಷೆಯಲ್ಲಿವೆ.

Advertisement

ಈ ಮಧ್ಯೆ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ನನ್ನ ವಿರೋಧವಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಭಾರತ ವಿರುದ್ಧ ಪಾಕಿಸ್ತಾನ ನಿರಂತರ ಭಯೋತ್ಪಾದನೆ ಮಾಡುತ್ತದೆ. ಅವರು ಭಯೋತ್ಪಾದನೆ ನಿಲ್ಲಿಸುವವರೆಗೆ ಯಾವುದೇ ಕ್ರೀಡೆ ಆಡಬಾರದು. ಗುಂಡಿಗೆ ಗುಂಡು ಕೊಡುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಕಳೆದ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದರು. ಇದರಲ್ಲಿ ಕರ್ನಾಟಕದವರು ಸೇರಿದ್ದಾರೆ. ಪಹಲ್ಗಾಮ್ ದಾಳಿಗೆ ಪಾಕಿಸ್ತಾನವೇ ಕಾರಣ. ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಕೂಡ ನಡೆದಿತ್ತು. ಈ ಎಲ್ಲಾ ಬೆಳವಣಿಗಳ ನಡುವೆ ಪಾಕ್ ವಿರುದ್ಧ ಭಾರತ ಪಂದ್ಯವಾಡುತ್ತಿರುವುದಕ್ಕೆ ವಿರೋಧ ಕೇಳಿ ಬರುತ್ತಿದೆ.


Spread the love

LEAVE A REPLY

Please enter your comment!
Please enter your name here