ಬೆಂಗಳೂರು: ನನ್ನ ಮೇಲೆಯೂ ಕೂಡ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಒತ್ತಡ ಇದೆ ಎಂದು ಮಾಜಿ ಸಂಸದ ಡಿ. ಕೆ ಸುರೇಶ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಮೇಲೆಯೂ ಕೂಡ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಒತ್ತಡ ಇದೆ. ನಾನು ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ.
ಪಕ್ಷದ ಶಿಸ್ತಿನ ಸಿಪಾಯಿ ನಾನು. ನನ್ನ ಆಚಾರ ವಿಚಾರಗಳನ್ನು ಮುಖಂಡರ ಗಮನಕ್ಕೆ ತರುತ್ತೇನೆ. ಅಧಿಕಾರ, ಚುನಾವಣೆ ದೃಷ್ಟಿಯಿಂದ ನಾನಿಲ್ಲ. ಮುಖಂಡರು ನನ್ನ ಅರ್ಥ ಮಾಡಿಕೊಳ್ಳುತ್ತಾರೆ. ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ, ಪಕ್ಷ ನನಗೆ ಅನಿವಾರ್ಯ. ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ಗೌರವಕ್ಕೆ ನಾನು ಸದಾ ಋಣಿ ಎಂದರು.
ನಾನು ಕೂಡ ಕಾರ್ಯಕರ್ತರಿಗೆ ಭರವಸೆ ನೀಡಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದಿದ್ದೇನೆ. ಪಕ್ಷ ಒಂದು ವೇಳೆ ನನ್ನನ್ನು ಆಯ್ಕೆ ಮಾಡಿದ್ರೆ, ನನ್ನ ಅಭಿಪ್ರಾಯ ತಿಳಿಸುತ್ತೇನೆ. ನಮ್ಮ ಮುಖಂಡರು, ಕಾರ್ಯಕರ್ತರು ಚುನಾವಣೆಗೆ ಸಿದ್ಧವಾಗಿದ್ದಾರೆ. ಬಿಜೆಪಿ ಇಬ್ಬರು ಅಭ್ಯರ್ಥಿಗಳನ್ನು ಘೋಷಣೆ ಮಾಡಿ, ಒಂದು ಜೆಡಿಎಸ್ಗೆ ಬಿಟ್ಟಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದರು.