ಬೆಂಗಳೂರು: ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ಭರವಸೆ ಇದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಡಾ ಕೇಸ್ ಸಿಬಿಐಗೆ ತನಿಖೆ ಕೊಡುವ ಬಗ್ಗೆ ಆತಂಕ ಇದೆಯಾ ಎಂಬ ಪ್ರಶ್ನೆಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು,
Advertisement
ನ್ಯಾಯಾಧೀಶರು ಏನು ಮಾಡುತ್ತಾರೆ ಎಂದು ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ. ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.