ನವದೆಹಲಿ: ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೈದರಾಬಾದ್ ಹೌಸ್ನಲ್ಲಿ ನಡೆದ ಭಾರತ-ರಷ್ಯಾ 23ನೇ ಶೃಂಗಸಭೆಯಲ್ಲಿ ಪುಟಿನ್ ಜೊತೆಗೆ ಸಂವಾದ ನಡೆಸಿದ ಪ್ರಧಾನಿ ಮೋದಿ,
ರಷ್ಯಾ ಮತ್ತು ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತವು ಯಾವಾಗಲೂ ಶಾಂತಿ ಸ್ಥಾಪನೆಗೆ ಆದ್ಯತೆ ನೀಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ನಾನು ಅನೇಕ ಜಾಗತಿಕ ನಾಯಕರೊಂದಿಗೆ ಮಾತನಾಡಿದ್ದೇನೆ.
ಪ್ರತಿಬಾರಿಯೂ ಎಲ್ಲಾ ನಾಯಕರಿಗೂ ಭಾರತ ಶಾಂತಿ ಸ್ಥಾಪನೆಗೆ ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಭರವಸೆ ನೀಡಿದ್ದೇನೆ. ಜಾಗತಿಕ ಶಾಂತಿ ಭಾರತದ ಪ್ರಮುಖ ನೀತಿಯಾಗಿದ್ದು, ಇದಕ್ಕಾಗಿ ತನ್ನೆಲ್ಲಾ ಶಕ್ತಿಯನ್ನೂ ಧಾರೆ ಎರೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.



