ಮಂಗಳೂರು: ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಣುಮಕ್ಕಳಿಗೂ ನಾನು ಆಭಾರಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಬೆಂಗಳೂರು ಅಥವ ಎಲ್ಲೋ ಕೂತು ಟೀಕೆ ಮಾಡೋರು ನಮಗೆ ಬೇಡ. ನಮಗೆ ನಮ್ಮವರು ಬೇಕು, ನಮ್ಮ ಜೊತೆ ನಿಲ್ಲೋರು ಬೇಕು. ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಣುಮಕ್ಕಳಿಗೂ ನಾನು ಆಭಾರಿ. ಎಸ್‌ಐಟಿ ವರದಿ ಅರ್ಧ ಬಂದ ಕಾರಣ ನಾನು ಇಷ್ಟು ಧೈರ್ಯವಾಗಿ ಮಾತನಾಡುತ್ತಿದ್ದೇನೆ ಎಂದರು.
ಇನ್ನೂ ನಮ್ಮ ಹೊಳಪು ಹಾಗೇ ಉಳಿದಿದೆ, ಇದಕ್ಕೆ ನಾನು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ನೋಡಿಕೊಳ್ಳುತ್ತಾರೆ. ನಾವು ಸತ್ಯದಿಂದ ಇದ್ದೇವೆ, ಹಾಗೆಯೇ ಮುಂದೆಯೂ ಇರುತ್ತೇವೆ. ಮುಂದಿನ ದಿನಗಳು ಉತ್ತಮವಾಗಿರಲಿ, ಎಲ್ಲರಿಗೂ ಧನ್ಯವಾದಗಳು ಎಂದು ನುಡಿದರು.
ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಅಂತ ಬೇಕು. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ ಎಂದು ಹೇಳಿದರು.