HomeEntertainmentಟೀಕೆ ಮಾಡಿದರೂ ನನಗೇನೂ ಬೇಜಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಟೀಕೆ ಮಾಡಿದರೂ ನನಗೇನೂ ಬೇಜಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

For Dai;y Updates Join Our whatsapp Group

Spread the love

ಬೆಂಗಳೂರು: ಅವರು ಟೀಕೆ ಮಾಡಿದರೂ ನನಗೇನೂ ಬೇಜಾರಿಲ್ಲ ಎಂದು ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ತಮ್ಮ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿರುವುದರ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿದ್ದು ಇದರಲ್ಲಿ ಡಿಕೆ ಶಿವಕುಮಾರ್‌ ಹೇಳಿಕೆ ತೀವ್ರ ಟೀಕೆಗೆ ಕಾರಣವಾಗಿದೆ. `ನಟ್ಟು, ಬೋಲ್ಟು ಟೈಟು’ ಮಾಡುವುದಾಗಿ ಡಿಕೆಶಿ ಹೇಳಿದ್ದು ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ತಮ್ಮ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿರುವುದರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಅವರು ಟೀಕೆ ಮಾಡಲಿ ಅಂತಾನೇ ಹೇಳುತ್ತಿದ್ದೇನೆ. ಅವರಿಗೆಲ್ಲಾ ಎಷ್ಟು ಸಹಾಯ ಮಾಡಿದ್ದೇನೆ ಎಂದು ನನಗೂ ಗೊತ್ತಿದೆ, ಸಹಾಯ ಮಾಡಿಸಿಕೊಂಡವರಿಗೂ ಗೊತ್ತಿದೆ ಎಂದಿದ್ದಾರೆ.

ಇದು ರಾಜ್ಯದ ಹಣ, ನೆಲ, ಜಲ, ನಿಮ್ಮ ಭಾಷೆ. ಈಗ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ ಮಾಡಿರುವುದು ಅವರ ಚಿತ್ರ ಬೆಳೆಯಲಿ ಎಂದು. ಅವರ ಚಿತ್ರಗಳಿಗೆ ಪ್ರಚಾರ ಅವ್ರು ಮಾಡದೇ ನಾವು ಬೆಳಗ್ಗೆ ಸಂಜೆ ಮಾಡೋಕೆ ಆಗುತ್ತಾ ಎಂದು ಡಿಕ ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.

ನಾಗಾಭರಣ ಅವರನ್ನು ಆಹ್ವಾನ ಮಾಡದೇ ಇರುವ ಬಗ್ಗೆ ಪ್ರತಿಕ್ರಿಯಿಸಿ, ನಾಗಾಭರಣ ಅವರಿಗೆ ಆಮಂತ್ರಣ ಕೊಡದೇ ಇರಬಹುದು. ಇದರಲ್ಲಿ ಇಲಾಖೆಯ ತಪ್ಪಿದೆಯೋ ಗೊತ್ತಿಲ್ಲ. ಆದರೆ ಕಾರ್ಯಕ್ರಮ ಅವರದ್ದು. ನನಗೆ ಗೊತ್ತು ಅವರು ಟೀಕೆ ಮಾಡುತ್ತಾರೆ ಎಂದು. ಅವರು ಟೀಕೆ ಮಾಡಿದರೂ ನನಗೇನೂ ಬೇಜಾರಿಲ್ಲ. ನಾವು ತಪ್ಪು ಮಾಡಿದ್ದರೆ ನಾವು ಸರಿ ಮಾಡಿಕೊಳ್ಳುತ್ತೇವೆ. ಅವ್ರು ತಪ್ಪು ಮಾಡಿದ್ರೆ ಅವ್ರು ಸರಿ ಮಾಡಿಕೊಳ್ಳಲಿ ಎಂದರು.

ಫಿಲಂ ಇಲ್ಲದೇ ಬದುಕುವ ಶಕ್ತಿ ನಮಗೆ ಇದೆ. ಆದರೆ ಅವರಿಗೆ ಫಿಲಂ ಪ್ರಮೋಷನ್‌ಗೆ ಜನರೂ ಬೇಕು, ಸರ್ಕಾರವೂ ಬೇಕು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!