ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗ ಅಲ್ಲ: ಹೆಚ್ ಡಿ ರೇವಣ್ಣ

0
Spread the love

ಹಾಸನ: ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗ ಅಲ್ಲ ಎಂದು ಮಾಜಿ ಸಚಿವ ಹೆಚ್ ​ಡಿ ರೇವಣ್ಣ ಕಿಡಿಕಾರಿದ್ದಾರೆ. ಜಿಲ್ಲೆಯ ಆಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅವರು ನನ್ನ ಕೈಗೆ ಸಿಗ್ದಲೆ ಎಲ್ಲಿ ಹೋಗುತ್ತಾರೆ. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ ಎಂದರು.

Advertisement

ಹಾಸನದಲ್ಲಿ ಜೆಡಿಎಸ್​ ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್‌ ಅವರನ್ನು ನಾಲ್ಕು ಬಾರಿ ಜನ ಗೆಲ್ಲಿಸಿದ್ದಾರೆ. ಆದರೆ, 2013ರಲ್ಲಿ ಅಲ್ಪಸಂಖ್ಯಾತರಿಂದ ಹೆಚ್​ಎಸ್​ ಪ್ರಕಾಶ್ ಸೋತರು. 2023ರ ಚುನಾವಣೆಯಲ್ಲಿ ಹಾಸನದಲ್ಲಿ 50 ಸಾವಿರ ಓಟಿಗೆ ಒಂದು ಓಟು ಕಡಿಮೆಯಾದರೆ ರಾಜೀನಾಮೆ ಕೊಡುತ್ತೇನೆ ಅಂಥ ಸವಾಲು ಇತ್ತು.

ಹೀಗಾಗಿ, ನಾನೇ (ಹೆಚ್​ಡಿ ರೇವಣ್ಣ) ಹಾಸನ ಕ್ಷೇತ್ರದಿಂದ ನಿಲ್ಲಬೇಕು ಎಂದು ಒತ್ತಾಯ ಬಂತು. ಕೊನೆಗೆ ಸ್ವರೂಪ್ ರೇವಣ್ಣ ಅವರನ್ನು ಕಣಕ್ಕೆ ಇಳಿಸಲಾಯ್ತು. ಈ ಹಿನ್ನೆಲೆಯಲ್ಲಿ ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here