ಬೆಂಗಳೂರು:- ಜಾತಿಗಣತಿಗೆ ಸಂಬಂಧಿಸಿದಂತೆ ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು,”ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿಜನಗಣತಿ ಮುಂದೂಡುವ ನಿರ್ಣಯದ ಬಗ್ಗೆ ಕೇಳಿದಾಗ ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ ಎಂದರು.
ದೆಹಲಿ ಭೇಟಿಯ ಕುರಿತು ಕೇಳಿದಾಗ, “ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ” ಎಂದು ತಿಳಿಸಿದರು.



