‘ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ’: ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡ ರಶ್ಮಿಕಾ ಮಂದಣ್ಣ

0
Spread the love

ಸದಾ ವಿವಾದಗಳಿಂದಲೇ ಸುದ್ದಿಯಾಗುವ ನಟಿ ರಶ್ಮಿಕಾ ಮಂದಣ್ಣ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೊಡವ ಸಮುದಾಯದಿಂದ ಸಿನಿಮಾಗೆ ಬಂದವರಲ್ಲಿ ನಾನೇ ಮೊದಲು ಎಂದು ಹೇಳುವ ಮೂಲಕ ನಟಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

Advertisement

ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ರಶ್ಮಿಕಾ ಮಂದಣ್ಣ, ಸಿನಿಮಾದಲ್ಲಿ ನಟಿಸಿ, ನನ್ನ ಮೊದಲ ಚೆಕ್ ಸಿಕ್ಕಾಗ, ಮನೆಯಲ್ಲಿ ಏನೆಲ್ಲಾ ಮಾತಾಡುತ್ತಿದ್ದರು ಅಂತ ನನಗೆ ನೆನಪಿದೆ. ಅದು ಸುಲಭವೂ ಆಗಿರಲಿಲ್ಲ. ಯಾಕಂದ್ರೆ ಕೂರ್ಗ್ ಸಮುದಾಯದಲ್ಲಿ, ಯಾರೂ ಸಿನಿಮಾ ಜಗತ್ತಿಗೆ ಬಂದಿರಲಿಲ್ಲ ಅಂತ ನನಗನಿಸುತ್ತೆ. ಇಡೀ ಕೂರ್ಗ್​ ಸಮುದಾಯದಲ್ಲಿ ನಾನೇ ಮೊದಲು ಸಿನಿಮಾ ಇಂಡಸ್ಟ್ರಿಗೆ ಬಂದಿದ್ದು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ನಮ್ಮ ಸಮುದಾಯದವರು ತುಂಬಾನೇ ಜಡ್ಜ್ ಮಾಡುತ್ತಾರೆ. ನಾನು ಆಡಿಷನ್ ಮಾಡುತ್ತೇನೆ ಎಂದು ನನ್ನ ಕುಟುಂಬದವರಿಗೆ ಹೇಳಿರಲಿಲ್ಲ. ಸಿನಿಮಾ ರಂಗಕ್ಕೆ ಹೋಗುತ್ತೇನೆ ಎಂದು ಕೂಡ ಅವರಿಗೆ ತಿಳಿಸಿರಲಿಲ್ಲ’ ಎಂದು ರಶ್ಮಿಕಾ ಹೇಳಿದ್ದಾರೆ.

ಸದ್ಯ ರಶ್ಮಿಕಾ ಹೇಳಿಕೆ ಸಾಕಷ್ಟು ಟೀಕೆಗೆ ಕಾರಣವಾಗಿದೆ. ನಟಿಗೆ ಚಿತ್ರರಂಗದ ಬಗ್ಗೆ ತಿಳುವಳಿಕೆಯೇ ಇಲ್ಲ ಎಂದು ಹಲವರು ಕಾಮೆಂಟ್‌ ಮಾಡಿದ್ದಾರೆ. ಅಂದ ಹಾಗೆ ಭಾರತ ಚಿತ್ರರಂಗದಲ್ಲಿ ತುಂಬಾನೇ ಖ್ಯಾತಿ ಪಡೆದಿರೋ ಪ್ರೇಮಾ ಅವರು ಕೂಡ ಕೊಡವ ಸಮುದಾಯದವರೇ. ಅವರು ಗಳಿಸಿದ ಖ್ಯಾತಿ ತುಂಬಾನೇ ದೊಡ್ಡದು. ರಶ್ಮಿಕಾ ಹುಟ್ಟುವಾಗ ಪ್ರೇಮಾ ಅವರು ಚಿತ್ರರಂಗಕ್ಕೆ ಬಂದು ಒಂದು ವರ್ಷ ಕಳೆದಿತ್ತು. ಅವರ ಬಗ್ಗೆ ರಶ್ಮಿಕಾ ಗೊತ್ತಿಲ್ಲ ಅನ್ನೋದು ಹಾಸ್ಯಾಸ್ಪದ ಎಂದು ನಟಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here