ಬೆಂಗಳೂರು: ನನಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು ಉಪ್ಪಾರಪೇಟೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಪತ್ರ ಬರೆದಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವೈದ್ಯರು ಹತ್ತು ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಗುಣಮುಖರಾದಲ್ಲಿ ಡಿಸೆಂಬರ್ 18 ರಂದು ವಿಚಾರಣೆಗೆ ಹಾಜರಾಗುತ್ತೇವೆ.
ಅಥವಾ ತನಿಖಾಧಿಕಾರಿಗಳೇ ಮಠಕ್ಕೆ ಬಂದು ಹೇಳಿಕೆ ಪಡೆಯಲು ಅಭ್ಯಂತರ ಇಲ್ಲ. ಈಗಾಗಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಲಾಗಿದೆ. ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಪ್ರಕರಣ ಬೆಳೆಸದೆ ಇಲ್ಲಿಗೆ ಮುಕ್ತಾಯಗೊಳಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪತ್ರ ಬರೆದಿದ್ದಾರೆ.
ಪ್ರಕರಣದ ದಾಖಲಿಸಿರುವ ವಿಚಾರವಾಗಿ ಚಂದ್ರಶೇಖರ್ ಸ್ವಾಮೀಜಿ ಮಾತನಾಡಿ, ಕ್ಷಮೆ ಕೇಳಿದ ಮೇಲೂ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ನನಗೆ ಹುಷಾರಿಲ್ಲ, ಎಲ್ಲಿಗೂ ಹೋಗುವುದಕ್ಕೆ ಆಗುತ್ತಿಲ್ಲ. ಹೀಗಾಗಿ ನಾನು ಇಂದು ವಿಚಾರಣೆಗೆ ಹೋಗುವುದಕ್ಕೆ ಆಗಲ್ಲ. ಮಠದವರೆಗೂ ಬಂದು ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರು ಮಠಕ್ಕೆ ಬಂದರೆ ಹೇಳಿಕೆ ಕೋಡುತ್ತೇನೆ ಎಂದರು.