ಬೆಂಗಳೂರು: ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆಗೆ ಮನವಿ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
Advertisement
ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆಗೆ ಮನವಿ ಮಾಡುತ್ತೇನೆ. ನಮ್ಮ ಪಾಲಿನ ನೀರನ್ನು ಕೊಡಬೇಕೆಂದು ಸಭೆ ಮಾಡುತ್ತೇನೆ. ಸಿದ್ದರಾಮಯ್ಯ ಜತೆ ಮಾತಾಡೋಕೆ ನನಗೆ ಯಾವುದೇ ಆತಂಕ ಇಲ್ಲ.
ನೀರಾವರಿ ಮಂತ್ರಿ ಜತೆ ಮಾತಾಡೋಕೆ ತೊಂದರೆ ಇಲ್ಲ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಸ್ವಲ್ಪ ಶಕ್ತಿ ನೀಡಿದರೇ ಸ್ಟೀಲ್ ಕಂಪನಿ ಪುನರುಜ್ಜೀವನಕ್ಕಾಗಿ ಹೋರಾಟ ಮಾಡುತ್ತಾರೆ.
ಭದ್ರಾವತಿ ಉಕ್ಕಿನ ಕಾರ್ಖಾನೆ ಮತ್ತೆ ಪುನರುಜ್ಜೀವನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ರಾಜಕೀಯ ಸಾಕು, ರಾಜ್ಯದ ಅಭಿವೃದ್ಧಿ ಮಾಡೋಣ. ತಮಿಳುನಾಡಿನವರ ಒಗ್ಗಟ್ಟಿನ ಹೋರಾಟವನ್ನು ನಾವು ಕಲಿಯಬೇಕು ಎಂದು ಹೇಳಿದರು.