ಬೆಂಗಳೂರು: ತಂದೆ–ತಾಯಿ ದೂರವಾದ ಬಳಿಕ ತಾನು ಒಂಟಿಯಾಗಿದ್ದೇನೆ ಎಂಬ ನೋವಿನಿಂದ 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಗರದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಲೇಖನಾ (17) ಎಂದು ಗುರುತಿಸಲಾಗಿದೆ. 10ನೇ ತರಗತಿಯಲ್ಲಿ ಅನುತ್ತೀರ್ಣಳಾಗಿದ್ದ ಲೇಖನಾ ಮನೆಯಲ್ಲೇ ಇದ್ದಳು. ಕೌಟುಂಬಿಕ ಕಲಹದಿಂದ ಇತ್ತೀಚೆಗೆ ತಂದೆ–ತಾಯಿ ಬೇರೆಯಾಗಿದ್ದು, ತಂದೆ ಬೇರೆಡೆ ವಾಸವಾಗಿದ್ದರೆ, ಲೇಖನಾ ತಾಯಿ ಜೊತೆಗೆ ವಾಸವಾಗಿದ್ದಳು.
‘ನನಗೆ ತಂದೆ–ತಾಯಿ ಪ್ರೀತಿ ಸಿಗುತ್ತಿಲ್ಲ. ನಾನು ಒಂಟಿಯಾಗಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್ ನೋಟ್ ಬರೆದಿರುವ ಲೇಖನಾ, ಬುಧವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತದೇಹವನ್ನು ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಘಟನೆ ಸಂಬಂಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.



