ಫಂಗಸ್ ನಿಂದ ಬದುಕಲು ಆಗುತ್ತಿಲ್ಲ, ದಯಮಾಡಿ ವಿಷ ಕೊಡಿ: ಜಡ್ಜ್‌ ಮುಂದೆ ದರ್ಶನ್‌ ಮನವಿ

0
Spread the love

ಬೆಂಗಳೂರು:– ನನಗೆ ಕೈಯೆಲ್ಲಾ ಫಂಗಸ್ ಬಂದಿದೆ. ಇಲ್ಲಿ ಬದುಕೋಕೆ ಆಗುತ್ತಿಲ್ಲ ಎಂದು ಜಡ್ಜ್ ಮುಂದೆ ನಟ ದರ್ಶನ್ ಕಣ್ಣೀರು ಹಾಕಿದ್ದಾರೆ.

Advertisement

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಇಂದು ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.

ವಿಚಾರಣೆ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪರಪ್ಪನ ಅಗ್ರಹಾರದಿಂದ ಹಾಜರಾದ ದರ್ಶನ್‌, ನನಗೆ ದಯಮಾಡಿ ವಿಷ ನೀಡಿ. ಬಿಸಿಲು ನೋಡಿ ಬಹಳ ದಿನವಾಗಿದೆ. ಬಟ್ಟೆಗಳು ವಾಸನೆ ಬರುತ್ತಿವೆ. ಫಂಗಸ್‌ನಿಂದಾಗಿ ಇಲ್ಲಿ ಬದುಕಲು ಆಗುತ್ತಿಲ್ಲ. ದಯಮಾಡಿ ನನಗೆ ವಿಷ ನೀಡುವಂತೆ ಆದೇಶಿಸಿ ಎಂದು ಮನವಿ ಮಾಡಿದರು. ಈ ಮನವಿಗೆ ಜಡ್ಜ್‌ ಹಾಗೆಲ್ಲ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ದೈವ ಭಕ್ತರಾಗಿರುವ ದರ್ಶನ್‌ ಇಂದು ಹಣೆಗೆ ಕುಂಕುಮ ಹಚ್ಚಿಕೊಂಡು ವಿಚಾರಣೆಗೆ ಹಾಜರಾಗಿದ್ದು ವಿಶೇಷವಾಗಿತ್ತು.


Spread the love

LEAVE A REPLY

Please enter your comment!
Please enter your name here