ಮಂಡ್ಯ:- ನನಗೆ ಕುಮಾರಸ್ವಾಮಿಯಂತೆ ಮೀಡಿಯಾ ಮುಂದೆ ನಾಲಿಗೆ ಹರಿಬಿಡಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾರು ಹೊಲಸು, ಕಚಡ ಎಂದು ಚರ್ಚೆ ಮಾಡೋಣ. 20 ವರ್ಷ ಅವರ ಜತೆ ಇದ್ದೆವು, ಯಾರು ಸ್ನೇಹ ಬಿಟ್ಟರು ಎಂದು ಚರ್ಚಿಸೋಣ. ಸ್ನೇಹಿತರಿಂದಲೇ ಸಿಎಂ ಆದೇ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದರು.
ಆಗ ಅದು ಕರಾಳದಿನ ಆಗಿರಲಿಲ್ಲವಾ? ಅಷ್ಟು ದಿನ ಏಕೆ ಕೊಳಚೆ ವಾಸನೆ ಕುಡಿದಿದ್ದರು? ಎಂದು ಮಂಡ್ಯ ಜಿಲ್ಲೆಯ ಹೊಸಗಾವಿ ಗ್ರಾಮದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.
ಮಾಜಿ ಸಿಎಂ ಆಗಿ ಎಚ್.ಡಿ. ಕುಮಾರಸ್ವಾಮಿ ಆ ರೀತಿ ಮಾತನಾಡಿದ್ದು ಎಷ್ಟು ಸರಿ? ಉತ್ತರ ಕೊಡುವುದು ಸೂಕ್ತ ಎಂದರೆ ಕೊಡುತ್ತೇನೆ. ಮಾತಿನಿಂದ ಯಾರೂ ದೊಡ್ಡವರು ಆಗುವುದಿಲ್ಲ, ನಡವಳಿಕೆಯಿಂದ ದೊಡ್ಡವರಾಗಬೇಕು. ಕೇಂದ್ರ ಸಚಿವ ಕುಮಾರಸ್ವಾಮಿಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ.
ಇತಿಹಾಸ ಚರ್ಚೆ ಮಾಡಬೇಕು ಅಂದರೆ ಸದನದಲ್ಲೇ ಚರ್ಚೆ ಮಾಡೋಣ ಎಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಪಂಥಾಹ್ವಾನ ನೀಡಿದ್ದಾರೆ.
20 ವರ್ಷ ಕೊಳಚೆ ಒಳಗೆ ಇದ್ದರು. ಎದುರಿಗೆ ಬಂದರೆ ಅವರ ಇತಿಹಾಸ ಹೇಳ್ತೇನೆ. ನಾನು ಹೇಳಲು ತಯಾರು ಇದ್ದೇನೆ, ನನ್ನ ಸ್ನೇಹಿತರನ್ನೂ ಕರೆದುಕೊಂಡು ಬರುವೆ ಎಂದು ಟಾಂಗ್ ಕೊಟ್ಟರು.