ಬೆಂಗಳೂರು: ರಾಮುಲು ಕಾಂಗ್ರೆಸ್ ಸೇರ್ಪಡೆ ಆಗೋ ಬಗ್ಗೆ ನನಗೆ ಅಷ್ಟು ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಶ್ರೀರಾಮುಲುರನ್ನ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲು ಡಿ.ಕೆ ಶಿವಕುಮಾರ್ ಪ್ರಯತ್ನ ಮಾಡ್ತಿದ್ದಾರೆ ಎಂಬ ಎಂಬ ಜನಾರ್ದನ ರೆಡ್ಡಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,
Advertisement
ರಾಮುಲು ಕಾಂಗ್ರೆಸ್ ಸೇರ್ಪಡೆ ಆಗೋ ಬಗ್ಗೆ ನನಗೆ ಅಷ್ಟು ಮಾಹಿತಿ ಇಲ್ಲ. ಬಿಜೆಪಿ ಪಕ್ಷದಲ್ಲಿ ಅವೆಲ್ಲ ಗಲಾಟೆ ಆಗ್ತಿದೆ. ನಮ್ಮಲ್ಲಿ ಅದರ ಬಗ್ಗೆ ಚರ್ಚೆಗಳು ಆಗಿಲ್ಲ. ಅಂತಹ ಪ್ರಸ್ತಾಪ ಕೂಡ ನಮ್ಮಲ್ಲಿ ಆಗಿಲ್ಲ.
ಸತೀಶ್ ಜಾರಕಿಗಹೊಳಿ ಹೆಸರು ಪ್ರಸ್ತಾಪ ಆಗಿರೋ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. ಲೋಕಸಭೆ ಚುನಾವಣೆ ವೇಳೆ ಶ್ರೀರಾಮುಲು ಕರೆ ತರೋ ಪ್ರಯತ್ನ ಆಗಿತ್ತು ಅನ್ನೋ ಬಗ್ಗೆ ನನಗೆ ಗೊತ್ತಿಲ್ಲ. ಅದಕ್ಕೆ ಕೆಪಿಸಿಸಿ ಅಧ್ಯಕ್ಷರು ಉತ್ತರ ಕೊಡ್ತಾರೆ ಅಂತ ತಿಳಿಸಿದರು.