ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ: ಬಿ.ಆರ್.ಪಾಟೀಲ್

0
Spread the love

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಗರಿಗೆದರಿದೆ ಸಿಎಂ,ಡಿಸಿಎಂ ಇಬ್ಬರೂ ದೆಹಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ ಎಂದು ಸಿಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ.

Advertisement

ಆದರೆ, ಅವರು ಐದು ವರ್ಷ ಇರಬೇಕು ಅಂತಾ ಬಯಸುತ್ತೇವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ. ಹೈಕಮಾಂಡ್ ಬೇರೆ ನಿರ್ಧಾರ ತೆಗೆದುಕೊಂಡರೆ ನಾವೇನು ಮಾಡುವುದಕ್ಕೆ ಆಗುತ್ತೆ? ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಇನ್ನೂ ದೊಡ್ಡ ಜವಾಬ್ದಾರಿ ನೀಡಬಹುದು. ಆದರೆ, ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಅಂತಾ ಯಾವ ಶಾಸಕರ ಮನಸ್ಸಿನಲ್ಲಿ ಇಲ್ಲ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here