ಬೆಂಗಳೂರು:- ಚಿನ್ನದ ವಂಚಕಿ ಐಶ್ವರ್ಯಗೌಡ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಡಿಕೆ ಸುರೇಶ್ ಹೇಳಿದ್ದಾರೆ.
ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ಇಂದು ಇಡಿ ಅಧಿಕಾರಿಗಳಿಂದ ವಿಚಾರಣೆಗೊಳಗಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಡಿಕೆ ಸುರೇಶ್, ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೋ ಗೊತ್ತಿಲ್ಲ, ಇಡಿಯವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಎಂದು ಹೇಳಿದರು.
ಐಶ್ವರ್ಯ ಗೌಡ ತಮ್ಮ ಕ್ಷೇತ್ರದವರು ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಭೇಟಿಯಾಗಿದ್ದರು, ಅದರ ನಂತರವೂ ತಾನು ಭಾಗಿಯಾದ ಒಂದೆರಡು ಕಾರ್ಯಕ್ರಮಗಳಲ್ಲಿ ಅವರಿದ್ದರು, ಅವರ ಬ್ಯಾಂಕ್ ವ್ಯವಹಾರ ಮತ್ತು ಆದಾಯ ತೆರಿಗೆ ವಂಚನೆ ಬಗ್ಗೆ ತನಗೇನೂ ಗೊತ್ತಿಲ್ಲ ಎಂದರು.



