ಮಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಹಿಂದುಗಳನ್ನು ಕೆರಳಿಸುವ ಹಾಗೆ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಆಕೆಯನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಯೆಟಿಷಿಯನ್ ಆಗಿ ಅಫೀಫ ಫಾರೀಮಾ, ಸೋಷಿಯಲ್ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು. ‘help stinky hindus are behind me’ (ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ). am i indian? yes. do i hate india? yes (ಹೌದು, ನಾನು ಭಾರತೀಯಳು.. ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ) ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.
ಅಫೀಫ ವಿವಾದಾತ್ಮಕ ಪೋಸ್ಟ್ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿತ್ತು. ಆಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಆಕ್ರೋಶ ಭುಗಿಲೇಳುತ್ತಿದ್ದಂತೆ ಎಚ್ಚೆತ್ತ ಆಸ್ಪತ್ರೆಯ ಆಡಳಿತ ಮಂಡಳಿ, ಅಫೀಫಳನ್ನು ಕೆಲಸದಿಂದ ವಜಾ ಮಾಡಿದೆ.
ವಿವಾದಾತ್ಮಕ ಪೋಸ್ಟ್ ವಿಚಾರ ಅಫೀಫ ವಿರುದ್ಧ ಮಂಗಳೂರು ಪೊಲೀಸರು FIR ದಾಖಲಿಸಿದ್ದಾರೆ. ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.