ಬಳ್ಳಾರಿ: ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಸಂಸದ ಈ ತುಕಾರಾಂ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಪ್ರಸ್ತಾವಾಗಿರುವ ವಿಚಾರವಾಗಿ ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಸಿಕ್ಕಾಗಿನಿಂದ ಕಾಂಗ್ರೆಸ್ ಹೈಕಮಾಂಡ್-ಪ್ರಧಾನ ಪಕ್ಷ,
Advertisement
ಪಕ್ಷದಲ್ಲಿ ಏನೇ ಬೆಳವಣಿಗೆ ನಡೆದರೂ ಅದು ಹೈಕಮಾಂಡ್ ನಿರ್ದೇಶನದ ಮೇರೆಗೆ ನಡೆಯುತ್ತದೆ, ನಿರ್ಣಯಗಳನ್ನು ಎಲ್ಲರೂ ಕೂತ್ಕೊಂಡು ಚರ್ಚೆ ಮಾಡಿ ತೆಗೆದುಕೊಳ್ಳುತ್ತಾರೆ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೆಲ್ಲ ಬದ್ಧರಾಗಿರುತ್ತಾರೆ ಎಂದು ಹೇಳಿದರು.
ನಾನು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿ, ಅವರ ಕೊಟ್ಟ ಜವಾಬ್ದಾರಿಗೆ ಬದ್ದನಾಗಿರುವೆ ಎನ್ನುವ ಮೂಲಕ ಪರೋಕ್ಷವಾಗಿ KPCC ಅಧ್ಯಕ್ಷ ಜವಾಬ್ದಾರಿ ವಹಿಸಿದ್ರೂ ನಿಭಾಹಿಸುವೆ ಎನ್ನುವಂತೆ ಮಾತನಾಡಿದರು.