ಬೆಂಗಳೂರು: ನ್ಯಾಯಾಲಯದಲ್ಲಿ ನಮಗೆ ವಿಶ್ವಾಸ ಇದೆ. ನ್ಯಾಯಾಲಯದಲ್ಲಿ ಪರಿಹಾರ ಸಿಗುವ ವಿಶ್ವಾಸ ಇದೆ. ನಾನೇನು ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಆದೇಶದ ವಿರುದ್ಧ ಅರ್ಜಿ ಹಾಕಿದ್ದೇನೆ. ನಮ್ಮ ಲಾಯರ್‌ಗಳು ಅದನ್ನ ನೋಡ್ತಾರೆ. ರಾಜ್ಯಪಾಲರ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದೇವೆ.
ಪ್ರಾಸಿಕ್ಯೂಷನ್‌ಗೆ ಕೊಟ್ಟಿರೋ ಅನುಮತಿ ರದ್ದು ಮಾಡಬೇಕು ಮತ್ತು ಮಧ್ಯಂತರ ತಡೆ ಕೊಡಿ ಅಂತಾ ಕೇಳಿದ್ದೇವೆ. ನನ್ನ ಪರ ವಾದ ಮಾಡೋಕೆ ಅಭಿಷೇಕ್ ಮನುಸಿಂಘ್ವಿ ಬರ್ತಿದ್ದಾರೆ. ನ್ಯಾಯಾಲಯದಲ್ಲಿ ನಮಗೆ ವಿಶ್ವಾಸ ಇದೆ. ನ್ಯಾಯಾಲಯದಲ್ಲಿ ಪರಿಹಾರ ಸಿಗುವ ವಿಶ್ವಾಸ ಇದೆ. ನಾನೇನು ತಪ್ಪು ಮಾಡಿಲ್ಲ ಎಂದರು.
ನಾನು ರಾಜಕೀಯದಲ್ಲಿ ಮಂತ್ರಿಯಾಗಿ 40 ವರ್ಷ ಆಯ್ತು ನಿನ್ನೆಗೆ. 40 ವರ್ಷಗಳಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರದ ಪುಸ್ತಕ. ರಾಜ್ಯದ ಜನರಿಗೆ ಗೊತ್ತಿದೆ. ಜನರ ಆಶೀರ್ವಾದದಿಂದ ಇಲ್ಲಿಯವರೆಗೆ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಜನರ ಸೇವೆ ಮಾಡಿಕೊಂಡು ಬಂದಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ಅಂತಾ ರಾಜ್ಯದ ಜನರಿಗೆ ಗೊತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಮಾಡೋದೂ ಇಲ್ಲ ಎಂದು ತಿಳಿಸಿದರು.