ಬೆಂಗಳೂರು: ನನ್ನನ್ನು ಎಐಸಿಸಿ ಒಬಿಸಿ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿದ ವಿಚಾರದಲ್ಲಿ ನನಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ,
Advertisement
ಹುದ್ದೆಯ ಬಗ್ಗೆ ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಯಾವ ಹುದ್ದೆ ಕೊಟ್ಟಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್‌ನೊಂದಿಗೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.
ಹುದ್ದೆ ಸ್ವೀಕರಿಸುವಿರಾ ಎಂಬ ಪ್ರಶ್ನೆಗೆ ತಕ್ಷಣ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜವಾಬ್ದಾರಿ ಕೊಟ್ಟಾಗ ಬಿಟ್ಟು ಓಡಿ ಹೋಗುವುದಾ? ನಾನಿನ್ನೂ ಏನೂ ಕೇಳಿಲ್ಲ. ಅವರು ಏನಾದರೂ ಘೋಷಣೆ ಮಾಡಿದ್ದರೆ, ಹೈಕಮಾಂಡ್ ಜೊತೆ ಮಾತಾಡಿ ಸ್ಪಷ್ಟನೆ ಪಡೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.