ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ ಎಂದು ವರದಿಗಳು ಹೇಳುತ್ತಿವೆ. ಕಾವೇರಿ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ನಿರ್ಧಾರವನ್ನು ಸಚಿವರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಮಾತನಾಡಿದ ಅವರು, “ನನಗೆ ಯಾವುದೇ ಅಸಮಾಧಾನವಿಲ್ಲ, ಹೈಕಮಾಂಡ್ ನಿರ್ಧಾರವನ್ನು ನಾನು ಗೌರವಿಸುತ್ತೇನೆ” ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡದೆ, ಅಂತಿಮ ತೀರ್ಮಾನ ಹೈಕಮಾಂಡ್ ಕೈಯಲ್ಲಿದೆ ಎಂದು ತಿಳಿಸಿದ್ದಾರೆ ಎನ್ನಲಾಗುತ್ತಿದೆ.
ಸಭೆಯ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಸಭೆಗೆ ಮೊದಲು ಅವರು ಸಿಎಂ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವ ದೃಶ್ಯವೂ ಗಮನ ಸೆಳೆದಿದೆ.
ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಅನಿಶ್ಚಿತತೆ ಹೆಚ್ಚಾಗಿದ್ದು, ಮುಂದಿನ ಹಂತದ ಹೈಕಮಾಂಡ್ ನಿರ್ಧಾರಗಳತ್ತ ಎಲ್ಲರ ಕಣ್ಣು ನೆಟ್ಟಿದೆ.



