ಮೈಸೂರು: ನನ್ನ ಮೇಲೆ ಇದುವರೆಗೆ ಒಂದೇ ಒಂದು ಕೇಸ್ ಕೂಡ ಪೊಲೀಸ್ ಠಾಣೆಯಲ್ಲಿ ಇಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರ ಸೇವೆ ಮಾಡುವುದು ಮಾತ್ರ ನನ್ನ ತಲೆಯಲ್ಲಿ ಇರುವುದು. ಅದು ಬಿಟ್ಟರೆ ನನ್ನ ತಲೆಯಲ್ಲಿ ಬೇರೆ ಯೋಚನೆ ಇಲ್ಲ.
ನನ್ನ ತಂದೆ ಪಟೇಲರು. ಅವರ ಮೇಲೆ ಒಂದೇ ಒಂದು ಪೊಲೀಸ್ ಕೇಸ್ ಇರಲಿಲ್ಲ. ನಾನು ಸಾರ್ವಜನಿಕ ಜೀವನಕ್ಕೆ ಬಂದು 54 ವರ್ಷವಾಗಿದೆ. ನನ್ನ ಮೇಲೆ ಇದುವರೆಗೆ ಒಂದೇ ಒಂದು ಕೇಸ್ ಕೂಡ ಪೊಲೀಸ್ ಠಾಣೆಯಲ್ಲಿ ಇಲ್ಲ. ನನ್ನ ಮಗನ ಮೇಲೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಗೃಹ ಮಂಡಳಿ ಅಧ್ಯಕ್ಷನಾಗಿದ್ದಾಗ ಜೆಡಿಎಸ್ – ಕಾಂಗ್ರೆಸ್ ಇಬ್ಬರು ಸೇರಿ ಅದರಲ್ಲಿ ಅವ್ಯವಹಾರ ಆಗಿದೆ ಎಂದು ತನಿಖೆ ಮಾಡಿಸಿದ್ದರು ಅಷ್ಟೆ. ನಾನು ಇದುವರೆಗೆ ಯಾರಿಂದಲೂ ನನ್ನ ರಕ್ಷಣೆ ಮಾಡಿ ಎಂದು ದೂರವಾಣಿ ಕರೆ ಮಾಡಿಸಿಲ್ಲ. ಕುಮಾರಸ್ವಾಮಿಯಿಂದ ನಾನು ಯಾವುದೇ ಕರೆ ಮಾಡಿಸಿ ನನ್ನ ರಕ್ಷಣೆ ಮಾಡಿಸಿಕೊಂಡಿಲ್ಲ. ನಾನು ನನ್ನ ಮಗ ಬಂಧನವಾಗುವಂತಹ ಯಾವ ಅಪರಾಧವೂ ಮಾಡಿಲ್ಲ ಟಾಂಗ್ ಕೊಟ್ಟರು.


