ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ: ಡಿಸಿಎಂ ಡಿಕೆ ಶಿವಕುಮಾರ್

0
Spread the love

ಬೆಂಗಳೂರು:- ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Advertisement

ಇಂದು ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಮತ್ತು ಮತ್ಸ್ಯ ಮೇಳದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲಾಗಿದೆ ಮತ್ತು ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಲಾಗುವುದು. ಸಣ್ಣ ಕೆರೆಗಳನ್ನು ಸ್ಥಳೀಯ ಸೊಸೈಟಿಗಳಿಗೆ ಜವಾಬ್ದಾರಿ ನೀಡಲಾಗಿದ್ದು, ಉಳಿದ ಕೆರೆಗಳಲ್ಲಿ ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ನಡೆಸಲು ಅವಕಾಶ ನೀಡಲಾಗುವುದು ಎಂದರು.

“ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತೀರಿ. ನಿಮಗೆ ಸೂರ್ಯ, ಚಂದ್ರ ಎರಡೇ ಕಾಣುವುದು. ಉಳಿದಂತೆ ನಿಮ್ಮ ಆತ್ಮಬಲದಿಂದ ಇದನ್ನು ಮಾಡಿಕೊಂಡು ಬರುತ್ತಿದ್ದೀರಿ. ಮೀನು ಹಿಡಿಯುವುದು ಬೇರೆ, ಮಾರಾಟ ಮಾಡುವುದು ಬೇರೆ. ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ.

ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ನೀವು ಶ್ರಮಜೀವಿಗಳು” ಎಂದು ಬಣ್ಣಿಸಿದರು.


Spread the love

LEAVE A REPLY

Please enter your comment!
Please enter your name here