ಮುಂಬೈ:- I Love You ಅನ್ನೋದ್ರಲ್ಲಿ ಲೈಂಗಿಕ ಉದ್ದೇಶವಿಲ್ಲ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಅಭಿಪ್ರಾಯಪಟ್ಟಿದೆ.
ವ್ಯಕ್ತಿಯೊಬ್ಬ ಕಳೆದ 10 ವರ್ಷಗಳ ಹಿಂದೆ 17 ವರ್ಷದ ಬಾಲಕಿಯೊಬ್ಬಳ ಕೈಹಿಡಿದು ‘I Love You’ ಎಂದು ಹೇಳಿದ್ದಕ್ಕೆ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸೆಷನ್ ನ್ಯಾಯಾಲಯವು, ತಪ್ಪಿತಸ್ಥ ಎಂದು ಪರಿಗಣಿಸಿ ಪೋಕ್ಸೋ ಕಾಯ್ದೆಯಡಿ 2017ರಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು. ಕೆಳಹಂತದ ನ್ಯಾಯಾಲಯದ ಆದೇಶವನ್ನು ವ್ಯಕ್ತಿಯು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಸೆಷನ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ವ್ಯಕ್ತಿಯ ವಿರುದ್ಧದ ಆರೋಪದಲ್ಲಿ ಯಾವುದೇ ಲೈಂಗಿಕ ಉದ್ದೇಶ ಕಂಡುಬಂದಿಲ್ಲ. ‘ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ಪದಗಳಲ್ಲಿ ಹೇಳಿದರೆ ಅದರಲ್ಲಿ ಯಾವುದೇ ಲೈಂಗಿಕ ಉದ್ದೇಶ ಇರುವುದಿಲ್ಲ ಎಂದು ನ್ಯಾ. ಊರ್ಮಿಳಾ ಜೋಶಿ ಫಾಲ್ಕೆ ಅವರಿದ್ದ ಪೀಠ ತನ್ನ ಆದೇಶದಲ್ಲಿ ಹೇಳಿದೆ.