ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ಹಿಂಪಡೆಯಲು ಮನವಿ ಮಾಡುತ್ತೇನೆ: ಡಿಕೆ ಸುರೇಶ್

0
Spread the love

ಬೆಂಗಳೂರು: ಸ್ವಾಮೀಜಿ ವಿರುದ್ಧದ ದೂರು ಹಿಂಪಡೆಯಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ‌ಸ್ವಾಮೀಜಿಗಳು ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಭಾರತದ ಸಂವಿಧಾನ ಎಲ್ಲರಿಗೂ ಒಂದೇ ಎಂಬುದನ್ನು ಪರಮ ಪೂಜ್ಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

Advertisement

ಸ್ವಾಮೀಜಿಗಳು ಸಾಂದರ್ಭಿಕವಾಗಿ ಆ ಮಾತು ಆಡಿದ್ದಾಗಿ ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ, ಸರ್ಕಾರ ದೂರನ್ನು ದಾಖಲು ಮಾಡಿದೆ. ಸ್ವಾಮೀಜಿ ವಿರುದ್ಧದ ದೂರು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು. ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.


Spread the love

LEAVE A REPLY

Please enter your comment!
Please enter your name here